ನವದೆಹಲಿ : ಬುಧವಾರ ಎಐಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮಲ್ಲಿಕಾರ್ಜುನ ಖರ್ಗೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಭೇಟಿಯಾದರು. ನಾಳೆಯಿಂದ ಶತಮಾನದ ಪಕ್ಷ ಕಾಂಗ್ರೆಸ್ನಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ. ಅಕ್ಟೋಬರ್ 17ರಂದು ನಡೆದ ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಶೇಕಡಾ 90ರಷ್ಟು ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ