ಬೆಂಗಳೂರು : ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ರೀತಿಯ ಕಾರ್ಯತಂತ್ರ ರೂಪಿಸಬಹುದು ಎಂಬ ಬಗ್ಗೆ ಸೋನಿಯಾ ಗಾಂಧಿಯವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಲನಕ್ಷೆ ಸಲ್ಲಿಸಿ ಬಂದಿದ್ದಾರೆ. ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ದೂರವಾಗಿರುವ ಮತ ಬ್ಯಾಂಕ್ ಮತ್ತೆ ಸೆಳೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಗಳ ಕುರಿತು ತಮ್ಮ ಅಭಿಪ್ರಾಯ ಹಾಗೂ ಯೋಜನೆ ಬಗ್ಗೆಯೂ ಸೋನಿಯಾ ಗಾಂಧಿಯವರ ಗಮನಕ್ಕೆ ತಂದಿದ್ದಾರೆ. ಅಷ್ಟೇ ಅಲ್ಲದೆ, ಪಕ್ಷ ಸಂಘಟನೆ ಹಾಗೂ ಚುನಾವಣೆಗೆ