ರಾಂಚಿ : ಮಾತನಾಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಮಲಗಿದ್ದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.12ನೇ ತರಗತಿಯಲ್ಲಿ ಓದುತ್ತಿದ್ದ 19 ವರ್ಷದ ಯುವತಿಯನ್ನು ಮೊದಲು ದುಮ್ಕಾದ ಫುಲೋ ಜಾನೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶೇಕಡಾ 90ರಷ್ಟು ದೇಹ ಸುಟ್ಟು ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಭಾನುವಾರ