ಸಿಂಗಾಪುರ : ಸುಮಾರು 1 ಕೆಜಿ ತೂಕದಷ್ಟು ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಭಾರತ ಮೂಲದ ವ್ಯಕ್ತಿಯನ್ನು ಸಿಂಗಾಪುರ ಗಲ್ಲಿಗೇರಿಸಿದೆ. ಅಂತಾರಾಷ್ಟ್ರೀಯ ಮಟ್ಟದ ವಿರೋಧದ ನಡುವೆಯೂ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು (46) ಸಿಂಗಾಪುರದ ಚಾಂಗಿ ಜೈಲು ಸಂಕೀರ್ಣದಲ್ಲಿ ಬುಧವಾರ ಗಲ್ಲಿಗೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.2017 ರಲ್ಲಿ ತಂಗರಾಜು 1,017.9 ಗ್ರಾಂ. ಗಾಂಜಾವನ್ನು ಕಳ್ಳಸಾಗಣೆ ಮಾಡುವ ಸಂಚಿನಲ್ಲಿ ತೊಡಗಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದ. ಸಿಂಗಾಪುರದ ಕಾನೂನಿನ