ಉದಯಪುರ: ಸತತ 2 ಲೋಕಸಭಾ ಸೋಲು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಸರಣಿ ಸೋಲಿನಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್, ಶುಕ್ರವಾರದಿಂದ ಇಲ್ಲಿ ಆರಂಭವಾದ ಪಕ್ಷದ 3 ದಿನದ ಚಿಂತನ ಶಿಬಿರದಲ್ಲಿ ‘ಒಂದು ಕುಟುಂಬ, ಒಂದು ಟಿಕೆಟ್’, ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡುವ ವೇಳೆ ವಯೋಮಿತಿ ನಿಗದಿ, ಎಲ್ಲಾ ಹಂತದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಹಲವು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದಲ್ಲಿ ವಂಶಪಾರಂಪರ್ಯ ರಾಜಕೀಯ