ಜೈಪುರ : ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಾರೀ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ. ಯಾತ್ರಾರ್ಥಿಗಳು ಜೈಸಲ್ಮೇರ್ನ ರಾಮದೇವ್ರಾದ ಬಾಬಾ ರಾಮ್ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದರು. ಈ ವೇಳೆ ಅವಘಡ