ಅಮೇಠಿ : ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಬೆಂಬಲಿಗನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಬರೌಲಿಯಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಸಿಂಗ್ ನಿವಾಸಕ್ಕೆ ನುಗ್ಗಿದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಪರಾರಿಯಾಗಿದ್ದಾರೆ.