ಕೇರಳ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುವ ಸಾಧ್ಯತೆಯಿದೆ. ಬಹುಕೋಟಿ ಸೋಲಾರ್ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲು ಕೇರಳ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್, ಸರಿತಾ ನಾಯರ್ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆದಿದೆ. ಹೀಗಾಗಿ ಸರಿತಾ ನಾಯರ್ ಪತ್ರದಲ್ಲಿ ಯಾರ ಹೆಸರನ್ನು ಬರೆದಿದ್ದಾರೋ ಅವರ ವಿರುದ್ಧ