ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್, ಸಿಪಿಎಂ ನಾಯಕ ಸೋಮನಾಥ ಚ್ಯಾಟರ್ಜಿ ಇಂದು ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೋಮನಾಥ ಚ್ಯಾಟರ್ಜಿ ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೃದಯಾಘಾತವಾಗಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಉಲ್ಬಣಿಸಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 10 ಬಾರಿ ಸಂಸದರು ಮತ್ತು ಲೋಕಸಭೆಯ ಸ್ಪೀಕರ್ ಆಗಿದ್ದ