ಹೆಂಡತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಸುಪಾರಿ ಕೊಟ್ಟು ಕೊಂದ ಮಗ

ಶಾಮ್ಲಿ| pavithra| Last Modified ಶುಕ್ರವಾರ, 19 ಫೆಬ್ರವರಿ 2021 (09:22 IST)
ಶಾಮ್ಲಿ : ಹೆಂಡತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತ ವ್ಯಕ್ತಿ ತನ್ನ ಸೊಸೆಗೆ ಲೈಂಗಿಕ ಕಿರುಕುಳ ನೀಡಿ ತನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದ. ತಂದೆಯ ನಡವಳಿಕೆಯಿಂದ ಅಸಮಾಧಾನಗೊಂಡ ಮಗ  ತಂದೆಯನ್ನು ಕೊಲ್ಲಲ್ಲು ಕೊಲೆಗಾರನಿಗೆ 2ಲಕ್ಷರೂ ಹಣ ನೀಡಿದ್ದಾನೆ.

ಅದರಂತೆ ಹೊಲಕ್ಕೆ ಬಂದ ತಂದೆಯನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಸತ್ಯಾಂಶವನ್ನು ಬಯಲಿಗೆ ತಂದಿದ್ದಾರೆ. ಆರೋಪಿ ಮಗ ಸೇರಿ ಮೂವರನ್ನು ಬಂಧಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :