ಮುಂಬೈ : ಮತ್ತೊಂದು ಮದುವೆಯಾಗುವ ಆಸೆಯನ್ನು ವ್ಯಕ್ತಪಡಿಸಿದ ತಂದೆಯನ್ನು ಮಗನೇ ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಶಂಕರ್ ರಾಂಭೌ ಬೋರ್ಹಾಡೆ (80) ಮೃತ ವ್ಯಕ್ತಿ. ಶೇಖರ್ ಬೋರ್ಹಾಡೆ (47) ಆರೋಪಿ. ಇವರು ವೈಶಂಪಾಯನಲಿ ಪ್ರದೇಶದ ಹೌಸಿಂಗ್ ಸೊಸೈಟಿಯ ನಿವಾಸಿಯಾಗಿದ್ದರು. ಮಹಾರಾಷ್ಟ್ರದ ಪುಣೆ ಜಿಲ್ಲೆಯ ರಾಜಗುರುನಗರದಲ್ಲಿ ಘಟನೆ ನಡೆದಿದೆ.ಶಂಕರ್ ಬೋರ್ಹಾಡೆ ಮ್ಯಾಟ್ರಿಮೋನಿಯಲ್ಲಿ ಮರು ಮದುವೆ ಮಾಡಿಕೊಳ್ಳುವ ಸಲುವಾಗಿ ತಮ್ಮ ಹೆಸರನ್ನು