ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕೊನೆಗೂ ತಮ್ಮ ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಟ್ಟ ಕಟ್ಟುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಶೀಘ್ರದಲ್ಲಿಯೇ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸೋನಿಯಾ ಗಾಂಧಿ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಹಲವು ದಿನಗಳಿಂದ ರಾಹುಲ್ ಯಾವಾಗ ಅಧ್ಯಕ್ಷರಾಗುತ್ತಾರೆ ಎನ್ನುವ ಬಗ್ಗೆ ಹಲವು ನಾಯಕರು ವಿಭಿನ್ನ ಹೇಳಿಕೆ ನೀಡುತ್ತಲೇ ಇದ್ದರು. ಪಕ್ಷದ ಹಲವು ರಾಜ್ಯ ಘಟಕಗಳು ಶೀಘ್ರದಲ್ಲಿಯೇ ರಾಹುಲ್