2019ರ ಲೋಕಸಭಾ ಚುನಾವಣೆಯಲ್ಲಿ ರಾಯ್ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಪುತ್ರಿ ಪ್ರಿಯಾಂಕ ವಾದ್ರಾ ಹೇಳುವ ಮೂಲಕ ಸೋನಿಯಾ ಗಾಂಧಿ ಅವರ ನಿವೃತ್ತಿಯ ವದಂತಿಯ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ, ಕಾಂಗ್ರೆಸ್ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿದ ಸೋನಿಯಾ ಗಾಂಧಿ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುತ್ತಾರೆ ಎಂಬ ವದಂತಿಯನ್ನು