ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆ, ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸೋನಿಯಾಗಾಂಧಿ ಜೈಪುರದಲ್ಲಿ ವಾಸ್ತವ್ಯ ಹೂಡಿದ್ದು ಹಲವು ರಾಜಕೀಯ ವದಂತಿಗಳಿಗೆ ಕಾರಣವಾಗಿತ್ತು. ಆದರೆ ದೆಹಲಿಯಲ್ಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕಳಪೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸೋನಿಯಾ ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.ವಿಧಾನಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಯಾವುದೇ ಚುನಾವಣಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ.. ದೆಹಲಿಯಲ್ಲಿ ಮಾಲಿನ್ಯದಿಂದ ಉಂಟಾಗುವ ವಿಷಪೂರಿತ ಗಾಳಿಯನ್ನು