ಮುಂಬೈ(ಆ.14): ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಪಕ್ಷಗಳ ನಾಯಕರ ಒಗ್ಗೂಡಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಆ.20ರಂದು ಸೋನಿಯಾ ಗಾಂಧಿ ಅವರು ವಿಪಕ್ಷಗಳ ನಾಯಕರಿಗಾಗಿ ಭೋಜನ ಕೂಟ ಏರ್ಪಡಿಸಿದ್ದಾರೆ. 1999ರಲ್ಲೂ ಸೋನಿಯಾ ಇದೇ ರೀತಿಯ ಚಹಾಕೂಟ ಏರ್ಪಡಿಸಿದ್ದರು. ಮುಂದೆ ಅದು 2004ರಲ್ಲಿ ಯುಪಿಎ ಸರ್ಕಾರದ ಉಗಮಕ್ಕೆ ನಾಂದಿ ಹಾಡಿತ್ತು. ಈಗ ಮತ್ತೆ ಅಂಥದ್ದೇ ಯತ್ನಕ್ಕೆ ಸೋನಿಯಾ ಚಾಲನೆ ನೀಡಿದ್ದು ಗಮನಾರ್ಹ. 20ರಂದು