ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ರಾಷ್ಟ್ರಾಧ್ಯಕ್ಷರಾಗಿ ಬಡ್ತಿ ನೀಡಲಾಗುತ್ತಿದೆ ಎನ್ನುವ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಎಂ.ವೆಂಕಯ್ಯನಾಯ್ಡು, ಸೋನಿಯಾ ಗಾಂಧಿಯವರಿಗೆ ಪಕ್ಷದಲ್ಲಿ ಒಗ್ಗಟ್ಟು ತರುವ ಶಕ್ತಿಯಿದೆ. ಇಲ್ಲವಾದಲ್ಲಿ ಪಕ್ಷ ಒಡೆದು ಛಿದ್ರವಾಗಲಿದೆ ಎಂದು ಹೇಳಿದ್ದಾರೆ.