ನವದೆಹಲಿ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಹಲವಾರು ಸುತ್ತಿನ ಮಾತುಕತೆಯಾಗಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆಯಾಗಲಿದ್ದು, ಎರಡು ಹಂತದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ. ದೊಡ್ಡ ಸಂಖ್ಯೆಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರು ದೆಹಲಿಗೆ ಬಂದ ಮೇಲೆ ಮತ್ತೊಮ್ಮೆ ಚರ್ಚೆ ಮಾಡಲಿದ್ದೇವೆ. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ನಿಮ್ಮ ಅನುಭವ ಬೇಕು