ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸುವುದನ್ನು ವಿರೋಧಿಸಿ ವೈಎಸ್ಆರ್ ಕಾಂಗ್ರೆಸ್ ಇಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದೆ. ಕಾಂಗ್ರೆಸ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಸಹ ಬಂದ್ಗೆ ಬೆಂಬಲ ನೀಡಿವೆ. ಆಂಧ್ರಪ್ರದೇಶಕ್ಕೆ 10 ವರ್ಷ ವಿಶೇಷ ಸ್ಥಾನಮಾನ ನೀಡಬೇಕು ಎಂಬುವುದು ಪ್ರತಿಭಟನಾಕಾರರ ಬೇಡಿಕೆಯಾಗಿದೆ.ಹೈದರಾಬಾದ್, ವಿಜಯವಾಡ, ತಿರುಮಲ, ವಿಶಾಖಪಟ್ಟಣ ಸೇರಿದಂತೆ 13 ಜಿಲ್ಲೆಗಳಲ್ಲಿ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಶಾಲೆ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್ಗೆ ರಾಜ್ಯಾದ್ಯಂತ