ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ ಹೆಸರುವಾಸಿಯಾದ ಬಂಗಾಳದಲ್ಲಿ ಸುಗಮವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗ ಬಿಗಿ ಕ್ರಮ ಕೈಗೊಂಡಿದೆ. ಈ ಹಿಂದೆ ಎರಡು ಬಾರಿ ಮಮತಾ ಅವರನ್ನು ಈ ಕ್ಷೇತ್ರದ ಜನ ಆಯ್ಕೆ ಮಾಡಿದ್ದರು. ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಮಮತಾ ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿ