ದೆಹಲಿ: ದೆಹಲಿಯ ತಲ್ಕಾತೋರಾ ಮೈದಾನಲ್ಲಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪರ್ ಚರ್ಚಾ ಎಂದು ಕರೆಯಲ್ಪಡುವ ಸಂವಾದಾತ್ಮಕ ಅಧಿವೇಶನವನ್ನು ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡಿದ್ದರು. ವಿದ್ಯಾರ್ಥಿಗಳು ಪ್ರಧಾನ ಮಂತ್ರಿಗಳೊಂದಿಗೆ ಪರೀಕ್ಷೆಯ ಕುರಿತು ಚರ್ಚೆ ನಡೆಸುವ ಕಾರ್ಯಕ್ರಮ ಇದಾಗಿತ್ತು. ಮೋದಿಯವರು ವಿದ್ಯಾರ್ಥಿಗಳಿಂದ ಪ್ರಶ್ನೆಯನ್ನು ತೆಗೆದುಕೊಳ್ಳುವ ಮೊದಲು ಅವರನ್ನು ಕುರಿತು, ನೀವು ಪ್ರಧಾನ ಮಂತ್ರಿಯೊಂದಿಗೆ ಮಾತನಾಡುತ್ತಿಲ್ಲ, ಸ್ನೇಹಿತನೊಂದಿಗೆ ಮಾತನಾಡುತ್ತಿದ್ದೀರಿ ಎಂದು ಹೇಳಿದರು. ಆದರೆ ವಿದ್ಯಾರ್ಥಿಯೊಬ್ಬ ಪ್ರಧಾನಿಯ ಡಿಗ್ರಿಯ ಕುರಿತು ಪ್ರಶ್ನೆಯೊಂದನ್ನು ಕೇಳಿದಾಗ ವಿಷಯವು ನಾಟಕೀಯವಾದ