ಕೋಲ್ಕೊತ್ತಾ: ಕೋಲ್ಕೊತ್ತಾದ ಪ್ರತಿಷ್ಠಿತ ಕಾಲೇಜೊಂದರಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಕಾಲೇಜು ಸಮಾರಂಭವೊಂದರ ಖರ್ಚಿನ ವಿವರ ಕೇಳಿದ್ದಕ್ಕೆ ವಿದ್ಯಾರ್ಥಿ ಸಂಘಟನೆಯ ಸದಸ್ಯನೊಬ್ಬನನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಿಗೆ ಹರಿಯಬಿಟ್ಟಿರುವ ಆಘಾತಕಾರಿ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಮೇ 17 ರಂದು ಈ ಘಟನೆ ನಡೆದಿತ್ತು. ಆದರೆ ಇದೀಗ ಆರೋಪಿ ವಿದ್ಯಾರ್ಥಿಗಳಲ್ಲೊಬ್ಬಾತ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.ಬೆತ್ತಲೆಯಾದ ವಿದ್ಯಾರ್ಥಿ ಹಾಗೂ