ರಾಂಚಿ : ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ.ಜಿಲ್ಲೆಯ ಗೋಪಿಕಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಪರಿಶಿಷ್ಟ ಪಂಗಡ ವಸತಿ ಶಾಲೆಯಲ್ಲಿ ಸೋಮವಾರ ಈ ಘಟನೆ ನಡೆದಿದೆ.ಜಾರ್ಖಂಡ್ ಅಕಾಡೆಮಿಕ್ ಕೌನ್ಸಿಲ್ (ಜೆಎಸಿ) ಶನಿವಾರ ಪ್ರಕಟಿಸಿದ 9 ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ 32 ವಿದ್ಯಾರ್ಥಿಗಳ ಪೈಕಿ 11 ವಿದ್ಯಾರ್ಥಿಗಳು