ಕಾಶಿ ವಿಶ್ವನಾಥ್ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್ ಕೋರ್ಟ್ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವೀಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ