ನವದೆಹಲಿ : ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ನೌಕರರಿಗೆ ಮೀಸಲಾತಿ ನಿರ್ಧರಿಸಲು ಯಾವುದೇ ಮಾನದಂಡವನ್ನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್, ಸಂಜೀವ್ ಖನ್ನಾ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠವು ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕುರಿತು ಇಂದು ತೀರ್ಪು ಪ್ರಕಟಿಸಿತು.ಬಡ್ತಿಯಲ್ಲಿ ಮೀಸಲಾತಿ ಜಾರಿಗೊಳಿಸುವಾಗ ಎಸ್ಸಿ/ಎಸ್ಟಿ ಜನರ ಪ್ರಾತಿನಿಧ್ಯವನ್ನು ನಿರ್ಧರಿಸುವ ಕೇಂದ್ರ ಮತ್ತು ರಾಜ್ಯಗಳಿಂದ