ಗುಜರಾತ್ನ ಸೂರತ್ನಲ್ಲಿರುವ ಶಾಪಿಂಗ್ಮಾಲ್ನಲ್ಲಿರುವ ಕೋಚಿಂಗ್ ಕೇಂದದಲ್ಲಿ ಅಗ್ನಿಅವಘಡ ಸಂಭವಿಸಿದ್ದು 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆ ಶಾರ್ಟ್ ಸಕ್ರೀಟ್ನಿಂದ ಕೋಚಿಂಗ್ಸೆಂಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡು ನೋಡುತ್ತಲೇ ಭಾರಿ ಅಗ್ನಿ ಅನಾಹುತಕ್ಕೆ ಕಾರಣವಾಗಿದೆ. ಕೂಡಲೇ ಅಗ್ನಿ ಅನಾಹುತ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಕಟ್ಟಡದಲ್ಲಿದ್ದು ಹಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.