ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ 40 ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ 18 ಸೈನಿಕರ ಬಲಿದಾನಕ್ಕೆ ಪ್ರತೀಕಾರ ತೀರಿಸಿಕೊಂಡಿದೆ. ದಾಳಿ ನಡೆದ ಕೆಲವೇ ಹೊತ್ತಿನಲ್ಲಿ ವಿಶ್ವದ ಬಲಿಷ್ಠ 5 ರಾಷ್ಟ್ರಗಳಿಗೆ ಈ ದಾಳಿಯ ಕುರಿತು ಭಾರತ ಮಾಹಿತಿ ನೀಡಿತು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಬಲ ರಾಷ್ಟ್ರಗಳಾದ ಅಮೇರಿಕಾ, ಫ್ರಾನ್ಸ್, ಬ್ರಿಟನ್, ರಷ್ಯಾ, ಚೀನಾಗಳಿಗೆ ಭಾರತ ತಾನು ಗಡಿಯಲ್ಲಿನ ಉಗ್ರನೆಲೆಗಳ ಮೇಲೆ ನಡೆಸಿದ ಸೀಮಿತ ದಾಳಿ ಕಾರ್ಯಾಚರಣೆಯ