ರಾಯಪುರ : ಕೊರೆಯುವ ಚಳಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ನವಜಾತ ಶಿಶುವೊಂದನ್ನು ಹೊಲದಲ್ಲಿ ಬಿಟ್ಟು ಹೋಗಿದ್ದು, ರಾತ್ರಿಯಿಡೀ ನಾಯಿಯೊಂದು ಆರೈಕೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.ಮುಂಗೇಲಿ ಜಿಲ್ಲೆಯ ಲೊರ್ಮಿಯ ಸರಿಸ್ಟಾಲ್ ಗ್ರಾಮದ ಹೊಲವೊಂದರಲ್ಲಿ ಈ ಘಟನೆ ನಡೆದಿದೆ. ಹೆಣ್ಣು ಮಗುವನ್ನು ಹೊಲದಲ್ಲಿ ಬಿಟ್ಟು ಹೋಗಲಾಗಿದ್ದು, ರಾತ್ರಿಯಿಡೀ ನಾಯಿಯೊಂದು ಆರೈಕೆ ಮಾಡುತ್ತಿತ್ತು. ಮಗುವಿನ ಅಳುವನ್ನು ಕೇಳಿದ ಗ್ರಾಮಸ್ಥರು ರಕ್ಷಿಸಿದ್ದಾರೆ.ಮಗುವನ್ನು ಹೊಲದಲ್ಲಿ ಬಿಟ್ಟಿದ್ದಕ್ಕಾಗಿ ಜನರು ವಿರೋಧ ವ್ಯಕ್ತಪಡಿಸಿದ್ದು, ಪ್ರಾಣಿಯು ತೋರಿದ ಸಹಾನುಭೂತಿ ಸಾಮಾಜಿಕ ಜಾಲತಾಣದಲ್ಲಿ