ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವರ್ತನೆಗೆ ಸಿಟ್ಟಿಗೆದ್ದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷರ ಮೇಲೆ ಸಚಿವೆ ಸುಷ್ಮಾ ಹರಿಹಾಯ್ದಿದ್ದಾರೆ. ಭಾರತ ಮತ್ತು ಚೀನಾ ನಡುವೆ ಢೋಕ್ಲಾಂ ಗಡಿ ವಿವಾದದ ವಿಚಾರದಲ್ಲಿ ವೈಮನಸ್ಯವಿದೆ. ಈ ಸಂದರ್ಭದಲ್ಲಿ ನಮ್ಮ ದೇಶದ ಅತೀ ದೊಡ್ಡ ಪಕ್ಷವೊಂದರ ನಾಯಕರೊಬ್ಬರು ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಿ ಗಡಿ ವಿವಾದದ ಸ್ಥಿತಿಗತಿಗಳ ಬಗ್ಗೆ ಚರ್ಚಿಸುವುದರ ಬದಲು ಚೀನಾದ ರಾಯಭಾರಿ ಭೇಟಿ ಮಾಡಿ