ಗಾಂಧಿನಗರ : ಗುಜರಾತ್ನ 17ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್. ಪಾಟೀಲ್ ತಿಳಿಸಿದರು. ಈಗಾಗಲೇ ಗುಜರಾತ್ನಲ್ಲಿ ಬಹುತೇಕ ಕ್ಷೇತ್ರಗಳ ಚುನಾವಣೆ ಪಕ್ಕಾ ಆಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಸಿದ್ಧವಾಗಿದೆ. ಸತತ 7ನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸುವ ಮೂಲಕ ದಾಖಲೆಯನ್ನು ನಿರ್ಮಾಣ ಮಾಡಲಿದೆ.ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.