ಕಾಬೂಲ್(ಆ.05): ಆಷ್ಘಾನಿಸ್ತಾನವನ್ನು ಮರಳಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಯತ್ನಿಸುತ್ತಿರುವ ತಾಲಿಬಾನ್ ಉಗ್ರರು, ಹೆರಾತ್ ಪ್ರಾಂತ್ಯದಲ್ಲಿ ಭಾರತ ಉಚಿತವಾಗಿ ನಿರ್ಮಿಸಿಕೊಟ್ಟಸಲ್ಮಾ ಅಣೆಕಟ್ಟಿನ ಮೇಲೆ ದಾಳಿ ನಡೆಸಲು ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆದರೆ ಉಗ್ರರ ಯತ್ನವನ್ನು ಸೇನೆ ವಿಫಲಗೊಳಿಸಿದ ಕಾರಣ, ದೊಡ್ಡ ಅಪಾಯವೊಂದು ತಪ್ಪಿದೆ. ‘ಹೆರಾತ್ ಪ್ರಾಂತ್ಯದಲ್ಲಿರುವ ಸಲ್ಮಾ ಡ್ಯಾಂ ಹೊಡೆದುರುಳಿಸಲು ತಾಲಿಬಾನ್ ಉಗ್ರರು ನಡೆಸಿದ ಪ್ರಯತ್ನ ವಿಫಲವಾಗಿದೆ. ಉಗ್ರರು ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದರು. ಈ ವೇಳೆ