ತಮಿಳುನಾಡಿನಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟು ಶಮನಗೊಳಿಸಲು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಇಂದು ಸಂಜೆ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ. ಎಐಎಡಿಎಂಕೆ ಮುಖಂಡ ಮಾಜಿ ಸಚಿವ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜ್ಯಪಾಲರನ್ನು ಭೇಟಿ ಮಾಡಿ ಬಹುಮತ ಸಾಬೀತಿಗೆ ಅವಕಾಶ ನೀಡುವಂತೆ ಕೋರಿದ್ದಾರೆ. ಮತ್ತೊಂದೆಡೆ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ, ತಮ್ಮ ಮೇಲೆ ಒತ್ತಡ ಹೇರಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಾಯಿತು