ನವದೆಹಲಿ : ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ ಕುರಿತ ಸಿನಿಮಾ ʼದಿ ಕಾಶ್ಮೀರ್ ಫೈಲ್ಸ್ʼಗೆ ರಾಷ್ಟ್ರ ರಾಜಧಾನಿಯಲ್ಲೂ ತೆರಿಗೆ ವಿನಾಯಿತಿ ಘೋಷಿಸಬೇಕು ಎಂಬ ಬಿಜೆಪಿ ಶಾಸಕರ ಒತ್ತಾಯಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿಯವರು ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದು ಚಾಟಿ ಬೀಸಿದ್ದಾರೆ.ನಮ್ಮನ್ನು ತೆರಿಗೆ ಮುಕ್ತ