ನವದೆಹಲಿ : ಇಂಧನದ ಮೇಲೆ ವಿಧಿಸಿರುವ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ಉಚಿತ ಲಸಿಕೆ, ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉಚಿತ ಊಟ, ಅಡುಗೆ ಅನಿಲ ಹಾಗೂ ಇತರ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದನ್ನು ಖಂಡಿಸಿ ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಸಂದರ್ಭದಲ್ಲಿ ಪುರಿ ಈ ಹೇಳಿಕೆ ನೀಡಿದ್ದಾರೆ.