ಸುಮಾರು 9 ವರ್ಷದ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಗಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಾರತೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಕೆ.ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಬಂಧಿಸಿದ್ದಾರೆ. ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಮಾರ್ಚ್ 31ರಂದು ಶೌಚಾಲಯ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದನು ಎಂದು ಆರೋಪಿಸಲಾಗಿದೆ.