ಜೈಪುರ : ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಖಾಸಗಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿ ಕೊಲೆ ಮಾಡಿದ್ದಾರೆ. ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ಹೊಡೆದು, ವಿದ್ಯಾರ್ಥಿಯ ಸಾವಿಗೆ ಕಾರಣರಾದ ಆರೋಪಿ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋಟಾಸ್ರ ಈ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೇ, ಈ ಘಟನೆ ನಡೆದ ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶ