ತೆಲಂಗಾಣ:ತೆಲಂಗಾಣದ ಸರ್ಕಾರಿ ಶಾಲೆಯ ಶಿಕ್ಷಕರು ತಲೆಗೆ ಹೆಲ್ಮೆಟ್ ಧರಿಸಿ ಪಾಠ ಮಾಡುವ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಶಂಕರ ಪೀಠ ಸರ್ಕಾರಿ ಹೈಸ್ಕೂಲ್ ನಲ್ಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಇದರಿಂದಾಗಿ ಮಳೆಗಾಲದಲ್ಲಿ ನೀರು ಸೋರಿ ಶಾಲೆಯ ಕೊಠಡಿಗಳಲ್ಲಿ ನೀರು ತುಂಬಿಕೊಳ್ಳುತ್ತದೆ. ಶಾಲೆಯಲ್ಲಿ ಸುಮಾರು 600 ವಿದ್ಯಾರ್ಥಿಗಳಿದ್ದು, ವಿದ್ಯಾರ್ಥಿಗಳ ಮೈಮೇಲೆ, ಶಿಕ್ಷಕರ ಮೇಲೆ ನೀರೇಲ್ಲ ಸೂರುತ್ತಿರುತ್ತದೆ. ಲೀಕಾಗಿರುವ ಸೀಲಿಂಗ್