ಭೋಪಾಲ್ : ರಾಮನವಮಿ ಆಚರಣೆ ವೇಳೆ ದೇವಾಲಯವೊಂದರ ನೆಲ ಕುಸಿತವಾಗಿದ್ದು, ಅದರ ಅಡಿಯಲ್ಲಿದ್ದ ಬಾವಿಗೆ ಸುಮಾರು 25 ಜನರು ಬಿದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಬಾವಿಗೆ ಬಿದ್ದಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ನೇಹನಗರ ಪ್ರದೇಶದಲ್ಲಿರುವ ಬಾಲೇಶ್ವರ ದೇವಾಲಯದಲ್ಲಿ ಈ ಘಟನೆ ವರದಿಯಾಗಿದೆ. ಘಟನೆಯ ಬಳಿಕ ದೇವಾಲಯದ ಆವರಣದಲ್ಲಿ ಉಂಟಾದ ಅವ್ಯವಸ್ಥೆಯ ಹಾಗೂ ರಕ್ಷಣಾ ಕಾರ್ಯಾಚರಣೆಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ವರದಿಗಳ ಪ್ರಕಾರ ದೇವಾಲಯದ ಆವರಣದಲ್ಲಿ ಮೆಟ್ಟಿಲು