ಮುಂಬೈ : ಬಸ್ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ. ಅವಘಡದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ. ಪುಣೆಗೆ ತೆರಳುತ್ತಿದ್ದ ಬಸ್ನಲ್ಲಿ ಸುಮಾರು 33 ಮಂದಿ ಇದ್ದರು. ಸಮೃದ್ಧಿ-ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬುಲ್ಧಾನಾ ಬಳಿ ಟೈರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು