ನವದೆಹಲಿ : ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಘರ್ಷಣೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಭಾರತದಲ್ಲಿ ಉಗ್ರಗಾಮಿ ದಾಳಿಯ ಸಾಧ್ಯತೆಯೂ ಇದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಆಧರಿಸಿ ಈ ಎಚ್ಚರಿಕೆಯನ್ನು ನೀಡಲಾಗಿದೆ. ಪಾಕಿಸ್ತಾನವು ಭಾರತ ವಿರೋಧಿ ಉಗ್ರಗಾಮಿ ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸುವ ಸುದೀರ್ಘ ಇತಿಹಾಸವನ್ನು ಹೊಂದಿದೆ.ಭಾರತ ಸರ್ಕಾರ ಕಾಶ್ಮೀರದ ಮೇಲೆ ಹಿಡಿತ ಹೆಚ್ಚಿಸುತ್ತಿದ್ದು ಇದು