ದೇಶದ ರಾಜಧಾನಿ ನವದೆಹಲಿಯಲ್ಲಿ 6 ರಿಂದ 7 ಉಗ್ರರು ಪ್ರವೇಶಿಸಿದ್ದಾರೆ ಎನ್ನುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿಯಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ನುಸುಳಿದ್ದಾರೆ ಎನ್ನುವ ಮಾಹಿತಿಗಳಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ಕಟ್ಟೆಚ್ಚರ ವಹಿಸಲಾಗಿದ್ದು, ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ ಮೂಲದ ಉಗ್ರರು ಜಮ್ಮು ಕಾಶ್ಮಿರ ಗಡಿ ಮಾರ್ಗವಾಗಿ ದೇಶದೊಳಗೆ ಪ್ರವೇಶಿಸಿದ್ದು ರಂಜಾನ್ ಹಬ್ಬದ ಸಂದರ್ಭದಲ್ಲಿ