ನವದೆಹಲಿ: ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣದ ಭೂಮಿಪೂಜೆಗೆ ಸಕಲ ಸಿದ್ಧತೆ ನಡೆದಿರುವ ಬೆನ್ನಲ್ಲೇ ಉಗ್ರರಿಂದ ಬೆದರಿಕೆ ಬಂದಿದೆ.ಅದೇ ದಿನ ದಾಳಿ ನಡೆಸಿ ಶಾಂತಿ ಕದಡಲು ಉಗ್ರರು ತಯಾರಿ ನಡೆಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಉತ್ತರ ಪ್ರದೇಶ, ದೆಹಲಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.ಭೂಮಿ ಪೂಜೆಯ ಬಳಿಕ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಗೂ ತೊಂದರೆ ಉಂಟು ಮಾಡಲು