Normal 0 false false false EN-US X-NONE X-NONE ಶ್ರೀನಗರ : ಜಮ್ಮು ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸಿಮ್ ಮತ್ತು ಅವರ ಕುಟುಂಬದವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬುಧವಾರ ಸಂಜೆ ಬಡಿಪೋರಾ ಜಿಲ್ಲಯಲ್ಲಿ ನಡೆದಿದೆ. ಬಿಜೆಪಿ ನಾಯಕ ಶೇಖ್ ವಾಸಿಮ್ ಹಾಗೂ ಅವರ ತಂದೆ ಮತ್ತು ಸಹೋದರ ಅಂಗಡಿಯೊಂದರಲ್ಲಿ ಕುಳಿತಿದ್ದ ವೇಳೆ ದಾಳಿ ಮಾಡಿದ ಭಯೋತ್ಪಾದಕರು ಅವರ ಮೇಲೆ ಗುಂಡಿನ ಮಳೆ ಸುರಿದಿದ್ದಾರೆ.