ಮುಂಬೈ : ಯುಎಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಲೋನ್ ಮಸ್ಕ್ ನಡುವಿನ ಭೇಟಿಯ ಒಂದು ತಿಂಗಳ ನಂತರ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಟೆಸ್ಲಾ ಕಂಪನಿ ತನ್ನ ಶಾಖೆಯನ್ನ ತೆರೆಯಲು ಜಾಗ ಪಡೆದುಕೊಂಡಿದೆ. ಟೆಸ್ಲಾ ಇಂಡಿಯಾ ಮೋಟಾರ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಪುಣೆಯ ವಿಮಾನ ನಗರದಲ್ಲಿರುವ ಪಂಚಶೀಲ್ ಬ್ಯುಸಿನೆಸ್ ಪಾರ್ಕ್ನಲ್ಲಿ ಕಚೇರಿಗೆ ತೆರೆಯಲು ಸ್ಥಳವನ್ನ ಗುತ್ತಿಗೆ ಪಡೆದುಕೊಂಡಿದೆ.ಇದು ಭಾರತದ ಮಾರುಕಟ್ಟೆಗೆ ಟೆಸ್ಲಾ ಎಲೆಕ್ಟ್ರಿಕ್ ವಾಹನ ಪ್ರವೇಶಕ್ಕೆ ದೊಡ್ಡ ಹೆಜ್ಜೆಯಾಗಿದೆ.