ನವದೆಹಲಿ: ಅರುಣಾಚಲ ಸರಕಾರ ವಜಾಗೊಳಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿದ್ದಂತೆ, ಪ್ರಧಾನಿ ಮೋದಿಗೆ ಪ್ರಜಾಪ್ರಭುತ್ವದ ಪಾಠ ಕಲಿಸಿದ್ದಕ್ಕೆ ಧನ್ಯವಾದಗಳು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.