ಮೂವರು ಯುವಕರು ಕೂಡಿಕೊಂಡು 18 ವರ್ಷದ ಯುವತಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ನಡೆದಿದೆ. ಮೂವರು ಯುವಕರು ಕಳೆದ ಆರು ತಿಂಗಳಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಬುಧವಾರ ನನ್ನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಸುಟ್ಟ ಗಾಯಗಳೊಂದಿಗೆ ಯುವತಿ ಪೊಲೀಸ್ ಠಾಣೆಗೆ ಹೋಗಿದ್ದಾಳೆ. ಶೇ.40ರಷ್ಟು ಸುಟ್ಟ ಗಾಯಗಳೊಂದಿಗೆ ಠಾಣೆಗೆ ಬಂದು ತನ್ನ ಯಾತನೆಯನ್ನು ಹೇಳಿಕೊಂಡ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ