ಖಾಸಗಿ ಕಂಪೆನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತ್ಯಾಚಾರಕ್ಕೊಳಗಾದ ಯುವತಿ ಎರಡು ವರ್ಷಗಳ ಹಿಂದೆ ಏರಿಂಡಿಯಾ ಉದ್ಯೋಗಿ ಅವರನ್ನು ಭೇಟಿಯಾಗಿದ್ದರು. ನಂತರ ಸ್ನೇಹ ಪ್ರೀತಿಯಾಗಿ ಪರಿವರ್ತನೆಯಾಗಿತ್ತು. ವಿವಾಹದ ನೆಪದಲ್ಲಿ ನಿರಂತರ ರೇಪ್ ಎಸಗಿದ ಆರೋಪಿ ಅರೆಸ್ಟ್ ಆಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಏರಿಂಡಿಯಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿ, ಮದುವೆ ನೆಪದಲ್ಲಿ ದೆಹಲಿಯ ಬೊರಿವಲಿಯಲ್ಲಿರುವ ತನ್ನ ನಿವಾಸದಲ್ಲಿ ನಿರಂತರವಾಗಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ