ಗುಜರಾತ್ ಚುನಾವಣೆಯ ಮತ ಎಣಿಕೆಯಲ್ಲಿ ಆಡಳಿತರೂಢ ಬಿಜೆಪಿ 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸತತ ಆರನೇ ಬಾರಿಗೆ ಗುಜರಾತ್ನಲ್ಲಿ ಗೆಲುವಿನತ್ತ ಮುನ್ನಡೆದಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲ ಪೈಪೋಟಿ ನೀಡಿದ್ದರೂ, ಬಹುಮತದ ಸನಿಹಕ್ಕೆ ಕೂಡ ಬರಲಾಗಿಲ್ಲ. ಪ್ರಧಾನಮಂತ್ರಿ ನರೇಂದ್ರಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಕಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಬಿಜೆಪಿ 110 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 66