ಭೋಪಾಲ್ : ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಶಾಲಾ ಬಸ್ ಚಾಲಕನ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.ಭೋಪಾಲ್ನ ಶಾಹಪುರ ಪ್ರದೇಶದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ನೆಲಸಮ ಕಾರ್ಯಾಚರಣೆ ನಡೆದಿದೆ. ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿದ್ದರಿಂದ ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಕಳೆದ ಗುರುವಾರ ಭೋಪಾಲ್ನಲ್ಲಿ ಈ ಘಟನೆ ನಡೆದಾಗ ಬಸ್ ಚಾಲಕನ ಜೊತೆಗೆ ವಾಹನದೊಳಗೆ ಮಹಿಳಾ ಅಟೆಂಡರ್ ಕೂಡ ಇದ್ದರು ಎಂದು ಬಾಲಕಿ ಪೋಷಕರು ತಿಳಿಸಿದ್ದು,