ನವದೆಹಲಿ : ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು ಆಚರಿಸುವ ಬದಲು ಗೋವುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಕರೆ ನೀಡಿತ್ತು. ಆದರೆ ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಈ ನಿರ್ಧಾರವನ್ನು ಮಂಡಳಿ ಹಿಂಪಡೆದಿದೆ. ಫೆಬ್ರವರಿ 14ರಂದು ವಿಶ್ವದೆಲ್ಲೆಡೆ ಪ್ರೇಮಿಗಳ ದಿನವನ್ನಾಗಿ ಆಚರಿಸಲಾಗುತ್ತದೆ.ಈ ದಿನವನ್ನು ಭಾರತದಲ್ಲಿ ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕೆಲ ದಿನಗಳ ಹಿಂದೆ