ನವದೆಹಲಿ : ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ಆರೋಪಿಗಳ ಬಂಧನ, ಶೋಧ ನಡೆಸುವುದು, ಆಸ್ತಿ ವಶಪಡಿಸಿಕೊಳ್ಳುವ ಅಧಿಕಾರ ಸೇರಿದಂತೆ ಇತ್ಯಾದಿ ವಿಚಾರಗಳ ಬಗ್ಗೆ ಜಾರಿ ನಿರ್ದೇಶನಾಲಯದ(ಇಡಿ) ವಿರುದ್ಧ ಎತ್ತಿದ್ದ ಎಲ್ಲ ಆಕ್ಷೇಪಣೆಗಳನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ.ಪಿಎಂಎಲ್ಎ ಕಾಯ್ದೆಯ ಹಲವು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾ. ಎ.ಎಂ ಖಾನ್ವಿಲ್ಕರ್, ನ್ಯಾ. ದಿನೇಶ್ ಮಹೇಶ್ವರಿ, ನ್ಯಾ. ಸಿ.ಟಿ. ರವಿಕುಮಾರ್ ಅವರಿದ್ಧ